ಪುಟಗಳು

The Karnataka State Civil Service Act 1978















ಸ್ವಾಮಿ ವಿವೇಕಾನಂದ


ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ.

ಸಿಂಹ ವಾಣಿ
ಎದ್ದೇಳಿ, ಕಾರ್ಯೋನ್ಮುಕರಾಗಿ ಈ ಬದುಕಾದರು ಎಷ್ಟು ದಿನ ಮಾನವರಾಗಿ ಹುಟ್ಟಿದಮೇಲೆ ಏನಾದರು ಸಾಧಿಸಿ
ಏಳಿ, ಎದ್ದೇಳಿ ಕಬ್ಬಿಣದ ಮಾಂಸಖಂಡ, ಉಕ್ಕಿನ ನರಮಂಡಲ,ವಿಧ್ಯುತ್ ಇಚ್ಛಾಶಕ್ತಿಯನ್ನು ಬೆಳಸಿಕೊಳ್ಳಿ ಕಾರ್ಯಪ್ರವೃತ್ತರಾಗಿ
ನಿಮ್ಮ ಯೋಚನೆಯಂತೆ ನೀವು, ನೀವೊಬ್ಬ ಋಷಿ ಎಂದು ಭಾವಿಸಿದರೆ ಋಷಿಯೇ ಆಗುತ್ತೀರಿ
ತಾನು ಧುರ್ಬಲ ಎಂದು ಹೇಳುವುದು ಅತ್ಯಂತ ದೊಡ್ಡ ಅಪರಾಧ.
ಈ ಪ್ರಪಂಚದಲ್ಲಿರುವ ಎಲ್ಲಾಶಕ್ತಿಗಳು ಈಗಾಗಲೆ ನಮ್ಮವು, ನಮ್ಮ ಕಣ್ಣಿಗೆ ನಾವೇ ಬಟ್ಟೆ ಕಟ್ಟಿ ಕಟ್ಟಿಕೊಂಡು ಕತ್ತಲೆ ಎನ್ನುತ್ತಿದ್ದೇವೆ
ಮನದೊಳಗೆ ಪುಸ್ತಕ ತೆರೆಯದ ಹೊರತು ಎಷ್ಟು ಪುಸ್ತಕ ಓದಿದರು ವ್ಯರ್ಥ
ಜೀವನವೋಂದು ಗರಡಿ ಮನೆ ಇಲ್ಲಿ ಬಲಿಷ್ಥರಾಗಲು ಬಂದಿದ್ದೇವೆ

ಕಲಕತ್ತೆಯಲ್ಲಿ ಜನನ :
ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩ ರಲ್ಲಿ ಕಲಕತ್ತೆಯಲ್ಲಿ ಜನಿಸಿದರು. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ವಿವೇಕಾನಂದ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅದ್ವೈತಸಿದ್ಧಾಂತದ ಉಪಯುಕ್ತತೆಯನ್ನು ಬೋಧಿಸಿದರು
ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ಸಹ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಅದ್ವೈತ ಸಿದ್ಧಾಂತ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು. ಇದೇ ಅವರ ಮಂತ್ರವಾಯಿತು, ಮತ್ತು ಅವರ "ದರಿದ್ರ ನಾರಾಯಣ ಸೇವೆ' ಎಂಬ ತತ್ತ್ವಕ್ಕೆ ದಾರಿ ಮಾಡಿಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು. ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ.

ವಿವೇಕಾನಂದರ ವಿಶ್ವಪರ್ಯಟನೆ
ಅವರು ಪ್ರಪಂಚದಾದ್ಯಂತ ಪ್ರಯಾಣಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವ ವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು. ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ.

ವಿವೇಕಾನಂದರು, ಧರ್ಮ ಮತ್ತು ಸರ್ಕಾರದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು. ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.

ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು ,ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು
ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಧರ್ಮಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ "ಅಮೆರಿಕದ ಸಹೋದರ ಸಹೋದರಿಯರೇ" ಎಂಬ ವಾಕ್ಯ ಚಿರವಾಗಿದೆ. ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ಪೂರ್ವ ದೇಶದ ವಿಚಿತ್ರ ಧರ್ಮ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ನ್ಯೂ ಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು. ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ "ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ" (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ. ಸ್ವಾಮಿ ವಿವೇಕಾನಂದರು ದಿವಂಗತರಾದಾಗ ಕೇವಲ ೩೯ ವರ್ಷದವರಾಗಿದ್ದರು.

ಸ್ವದೇಶ ಮಂತ್ರ
ಆರ್ಯಮಾತೆಯ ಅಮೃತಪುತ್ರರಿರಾ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ! ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವದಕ್ಕಾಗಿ ಇರುವದು. ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು - ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು. ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‌ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ "ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ". ಸಹೋದರರೆ, ಹೀಗೆ ಸಾರಿ "ಭಾರತಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ." ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, "ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ತೊಲಗಿಸು ;ನಮ್ಮನ್ನು ಪುರುಷಸಿಂಹರನ್ನಾಗಿ ಮಾಡು."

ಕೆ ಎಸ್ಅಶ್ವಥ್ Wikipedia ಇಂದ



ಕನ್ನಡ ಚಿತ್ರರಂಗ ದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಅಶ್ವಥ್ ಅವರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ.
ವ್ಯಕ್ತಿ ಪರಿಚಯ

(೧೯೨೫-೨೦೧೦). ಸುಮಾರು ಐದು ದಶಕಗಳ ಅವಧಿಯಲ್ಲಿ ೩೫೦ಕ್ಕಿಂತಲೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟ. ಶಿಸ್ತು, ಸಮಯಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರ ನಿರ್ಮಾಣವಲಯದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾದ ವ್ಯಕ್ತಿ ಅಶ್ವತ್ಥ್. ಅವರ ಹಿರಿಯರು ಹೊಳೆನರಸೀಪುರ ತಾಲ್ಲೂಕಿನ ಕರಗದಹಳ್ಳಿಯವರು. ತಂದೆ ಸುಬ್ಬರಾಯರು. ಮಾರ್ಚ್ ೨೫, ೧೯೨೫ರಲ್ಲಿ ಜನನ. ಮೊದಲ ಹೆಸರು ಅಶ್ವತ್ಥನಾರಾಯಣ. ಚಿತ್ರರಂಗಕ್ಕೆ ಬಂದ ನಂತರ ನಾರಾಯಣ ಕಳಚಿಕೊಂಡಿತು. ಓದಿದ್ದು ಇಂಟರ್ಮೀಡಿಯಟ್ವರೆಗೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹಭಾಗಿ, ಆಹಾರ ಇಲಾಖೆಯಲ್ಲಿ ನೌಕರಿ(೧೯೪೪), ನಾಟಕದ ಗೀಳು, ಆಕಾಶವಾಣಿಯಲ್ಲಿ ನಾಟಕ ವಿಭಾಗದಲ್ಲಿ ದುಡಿಮೆ; ನಾಟಕ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್. ವಾಮನರಾಯರಿಂದ ಅಭಿನಯದಲ್ಲಿ ತರಬೇತಿ ಪಡೆಯುವ ಅವಕಾಶ ಲಭ್ಯ. ಅಶ್ವತ್ಥ್ ಅವರಿಗೆ ಚಲನಚಿತ್ರ ಸೇರಬೇಕೆಂಬ ಕಲ್ಪನೆಯೇ ಇರಲಿಲ್ಲ. ಅವಕಾಶ ಅದಾಗಿಯೇ ಬಂದಿತು. ನಾಟಕದಲ್ಲಿನ ಇವರ ಅಭಿನಯ ನೋಡಿ ಮೆಚ್ಚಿದ ಹಿರಿಯ ನಿರ್ದೇಶಕ ಕೆ.ಸುಬ್ರಹ್ಮಣ್ಯಂ ಅವರಿಂದ ಚಿತ್ರರಂಗಕ್ಕೆ ಆಹ್ವಾನ. ಮೈಸೂರಿನ ಪ್ರಿಮಿಯರ್ನಲ್ಲಿ ತಯಾರಾದ, ಭಾಗಶಃ ವರ್ಣದಲ್ಲಿ ಚಿತ್ರಣವಾದ ‘ಸ್ತ್ರೀ ರತ್ನ’(೧೯೫೫) ಚಿತ್ರದಲ್ಲಿ ನಾಯಕ. ‘ಸ್ತ್ರೀ ರತ್ನ’ ಚಿತ್ರದ ನಂತರ, ಚಿತ್ರರಂಗದಲ್ಲೆ ಮುಂದುವರೆಯುವ ನಿರ್ಧಾರ. ಆದರೆ ಆ ಅವಧಿಯಲ್ಲಿ ಕನ್ನಡ ಚಿತ್ರ ನಿರ್ಮಾಣ ಚಟುವಟಿಕೆ ಮಂದಗತಿಯಲ್ಲಿ ಸಾಗಿತ್ತು. ಆದರೂ ಚಿತ್ರರಂಗದ ಅಭಿನಯವನ್ನೇ ವೃತ್ತಿಯಾಗಿ ಸ್ವೀಕರಿಸಲು ಸಂಕಲ್ಪಿಸಿದ್ದ ಅಶ್ವತ್ಥ್, ಆಗ ಕನ್ನಡ ಚಿತ್ರ ನಿರ್ಮಾಣದ ಕೇಂದ್ರವಾಗಿದ್ದ ಮದರಾಸಿನಲ್ಲೇ ನೆಲೆಸಲು ನಿರ್ಧರಿಸಿದರು. ನಾಯಕ ಪಾತ್ರಗಳಿಂದ ಸರಿದು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಸಂಕಲ್ಪ ಮಾಡಿದರು (೧೯೬೦). ಈ ನಿರ್ಧಾರವೂ ಯೋಗ್ಯವಾದುದೇ. ಇದರಿಂದ ಅವರ ಬಹುಮುಖ ಪ್ರತಿಭೆಯು ಪ್ರಕಾಶಕ್ಕೆ ಮುಕ್ತ ಅವಕಾಶ ದೊರೆಯಿತು. ಆರಂಭದದಿನಗಳಲ್ಲಿ ತಯಾರಾಗುತ್ತಿದ್ದದು ಹೆಚ್ಚಾಗಿ ಪೌರಾಣಿಕ ಹಾಗೂ ಭಕ್ತಿ ಪ್ರಧಾನ ಚಿತ್ರಗಳು. ಪೌರಾಣಿಕ ಭಕ್ತಿ ಪ್ರಧಾನ ಚಿತ್ರಗಳಲ್ಲಿ ನಾರದನ ಪಾತ್ರಗಳು ಅರಸಿ ಬಂದವು. ‘ಮಹಿಷಾಸುರ ಮರ್ದಿನಿ’, ‘ಸ್ವರ್ಣಗೌರಿ’, ‘ಭಕ್ತ ಪ್ರಹ್ಲಾದ’, ‘ದಶಾವತಾರ’, ‘ನಾಗಾರ್ಜುನ’-ಇವೇ ಮೊದಲಾದ ಚಿತ್ರಗಳಲ್ಲಿ ಅಶ್ವತ್ಥ್ ಅವರ ನಾರದನ ಪಾತ್ರ ಜನಮೆಚ್ಚುಗೆ ಪಡೆಯಿತು.

ಅಶ್ವತ್ಥ್ ವೈವಿಧ್ಯಮಯ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ; ಆ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಜನರಿಗೆ ಅಪ್ತವಾದುದು ತಂದೆಯ ಪಾತ್ರ; ಮನೆಯ ಹಿರಿಯಣ್ಣನ ಪಾತ್ರ, ‘ಗಾಳಿಗೋಪುರ’ ಚಿತ್ರದಿಂದ ಶಾಶ್ವತವಾಗಿ ಪ್ರಧಾನ ಪೋಷಕ ಪಾತ್ರಗಳಿಗೆ ಆಯ್ಕೆ. ‘ನಾಗರಹಾವು’ ಚಿತ್ರದ ಚಾಮಯ್ಯ ಮೇಸ್ಟ್ರು, ಮಕ್ಕಳಿಲ್ಲದ ಮೇಸ್ಟ್ರು. ತಾನು ಅತಿಯಾಗಿ ಪ್ರೀತಿಸುವ ತಂಟೆಕೋರ ವಿದ್ಯಾರ್ಥಿ. ಇವರಿಬ್ಬರ ನಡುವಣ ಮಾನವೀಯ ಸಂಬಂಧಗಳು, ಸಮಸ್ಯೆಗಳು, ದುರಂತದಲ್ಲಿ ಕೊನೆಗೊಳ್ಳುವ ಈ ಚಿತ್ರದಲ್ಲಿ ಮನಮಿಡಿಯುವಂತಹ ಅಭಿನಯ. ‘ಕಸ್ತೂರಿ ನಿವಾಸ’ದ ನಿಷ್ಠಾವಂತ ಸೇವಕ ರಾಮಯ್ಯ, ‘ಮಗ ಮೊಮ್ಮಗ’, ‘ತಂದೆ-ಮಕ್ಕಳು’ ಚಿತ್ರದಲ್ಲಿ ತಂದೆಯಾಗಿ ನೀಡಿರುವ ಮನ ಮುಟ್ಟುವ ಅಭಿನಯ. ‘ಸರ್ವಮಂಗಳ’ ಚಿತ್ರದಲ್ಲಿ ಕುರೂಪಿ ಸುಬ್ಬರಾಯನ ಪಾತ್ರ, ಅಶ್ವತ್ಥ್ ಅವರ ಅಪ್ರತಿಮ ಪ್ರತಿಭೆಯ, ಭಾವಪೂರ್ಣ ಅಭಿನಯಕ್ಕೆ ಇವು ಕೆಲವು ನಿದರ್ಶನಗಳು. ಕುಟುಂಬದ ಯಜಮಾನ, ಒಲವಿನ ಸೋದರ, ತಂದೆ ಮೊದಲಾದ ಸಜ್ಜನಿಕೆಯ ಪಾತ್ರಗಳ ಜೊತೆಗೆ ಹಾಸ್ಯ ಪಾತ್ರಗಳಲ್ಲೂ ಖಳನಾಯಕನ ಪಾತ್ರಗಳಲ್ಲೂ ಅವರು ಸಹಜವಾಗಿ ಅಭಿನಯಿಸಿದ್ದಾರೆ. ಪುಟ್ಟ ಪಾತ್ರಗಳಲ್ಲಿ ಚೊಕ್ಕ ಅಭಿನಯ ಇದು ಅವರ ಹಿರಿಮೆ. ಪ್ರಧಾನ ಪೋಷಕ ಚಿತ್ರಗಳಲ್ಲಿ ಅಶ್ವತ್ಥ-ಪಂಢರಿಬಾಯಿ ಜೋಡಿ ಅತ್ಯಂತ ಜನಪ್ರಿಯ. ‘ನಮ್ಮ ಮಕ್ಕಳು’, ‘ನಾಗರಹಾವು’, ‘ಮುತ್ತಿನಹಾರ’ ಚಿತ್ರಗಳ ಅಭಿನಯಕ್ಕಾಗಿ ‘ಶ್ರೇಷ್ಠ ಪೋಷಕ ನಟ’ರಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ತಮ್ಮ ಅಭಿನಯ, ಗಾಯನದಿಂದ ಕನ್ನಡ ಚಲನ ಚಿತ್ರೋದ್ಯಮಕ್ಕೆ ಘನತೆ, ಸ್ಥಿರತೆ ತಂದ ಡಾ.ರಾಜಕುಮಾರ್ ಹೆಸರಿನಲ್ಲಿ ಸರಕಾರ ಚಲನಚಿತ್ರರಂಗಕ್ಕೆ ಅಮೋಘ ಸೇವೆ ಸಲ್ಲಿಸಿದವರಿಗೆ ೧೯೯೩-೯೪ನೇ ಸಾಲಿನಿಂದ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗೆ ಭಾಜನರಾದ ಪ್ರಪ್ರಥಮ ನಟ-ಕೆ.ಎಸ್. ಅಶ್ವತ್ಥ್. ೧೯೯೫ರಲ್ಲಿ ಅಶ್ವತ್ಥ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು. ಅದು ಅವರ ಅಭಿಮಾನಿ ಪ್ರೇಕ್ಷಕರಿಗೆ ಅಘಾತವಾಗಿತ್ತು. ಆದರೆ ‘ಶಬ್ದವೇಧಿ’ ಚಿತ್ರದ ಮೂಲಕ ಅವರ ಪುನರಾಗಮನವನ್ನು ಜನರು ಸಂಭ್ರಮದಿಂದ ಸ್ವಾಗತಿಸಿದರು