ಪುಟಗಳು

ಛಂದ ಪುಸ್ತಕ ಆಹ್ವಾನ

ಕಳೆದ ಏಳು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2011ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ.
ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.
ಈ ಪುಸ್ತಕವನ್ನು 2012ರ ಫೆಬ್ರವರಿ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ. ಕತೆಗಳನ್ನು ಕಳಿಸಬೇಕಾದ ವಿಳಾಸ:ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 076 (ದೂ. 98444 22782)
ಕೊನೆಯ ದಿನಾಂಕ: ಜನವರಿ 10, 2012ಹೆಚ್ಚಿನ ವಿವರಗಳಿಗೆ: vas123u@yahoo.com

ಕನ್ನಡ ಶಾಲೆ ಮುಚ್ಚುವ ನಿರ್ಧಾರ, ಸರಕಾರಕ್ಕೆ ಮುಖಭಂಗ


Kannada Medium Schools
 
ಬೆಂಗಳೂರು, ಡಿ 16: ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ಅಥವಾ ಬೇರೆ ಶಾಲೆಗಳ ಜೊತೆ ವಿಲೀನಗೊಳಿಸುವ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಶುಕ್ರವಾರ (ಡಿ 16) ವಿಚಾರಣೆ ನಡೆಸಿದ ನ್ಯಾಯಾಲಯ ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು ಅಲ್ಲದೆ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರಕಾರಕ್ಕೆ ಆದೇಶ ನೀಡಿದೆ.

ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಚಂದ್ರಶೇಖರ್ ಕಂಬಾರ ಅಲ್ಲದೆ ಚನ್ನವೀರ ಕಣವಿ ಮುಂತಾದವರು, ಸರಕಾರದ ಶಾಲೆ ಮುಚ್ಚುವ ನಿರ್ಧಾರವನ್ನು ಪ್ರಶ್ತ್ನಿಸಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದರು.

LPC Form (last Payment Certificate)


ದೇಶಕ್ಕೆ ಸ್ವಾತಂತ್ರ್ಯ ಬಂದರೂ ಕವಡೇಪುರಕ್ಕೆ ಸ್ವಾತಂತ್ರ್ಯ ಬಂದಿಲ್ಲರೀ



ಶೀರ್ಷಿಕೆ:ಕವಡೆಪುರದ ಕೌರವರು ಲೇಖಕರು: ವೈ.ಎಸ್. ಹರಗಿ ಪ್ರಕಾಶಕರು: ಶ್ರೀನಿವಾಸ ಪುಸ್ತಕ ಪ್ರಕಾಶನ ಪುಟ: 344 ಬೆಲೆ:ರೂ.170/-